ಗಣೇಶ ವಿಸರ್ಜನೆ ವೇಳೆ ಚಾಕು ಇರಿತ

ಗಣೇಶ ವಿಸರ್ಜನೆ ವೇಳೆ ಚಾಕು ಇರಿತ

ಶಿವಮೊಗ್ಗ: ಗಣಪತಿ ವಿಸರ್ಜನಾ ಮೆರವಣಿಗೆ ವೇಳೆ ಓರ್ವ ಯುವಕನಿಗೆ ಚಾಕು ಇರಿದ ಘಟನೆ ಭಾನುವಾರ ಭದ್ರಾವತಿ ನಗರದ ಶಿವರಾಮ ನಗರದಲ್ಲಿ ನಡೆದಿರುವುದು ತಡವಾಗಿ ಬೆಳಕಿಗೆ ಬಂದಿದೆ.

ಮಂಜುನಾಥ ಚಾಕು ಇರಿತದಲ್ಲಿ ಗಾಯಗೊಂಡ ಯುವಕ. ಅವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ.

ಘಟನೆ ಸಂಬಂಧ ಮಂಜುನಾಥನ ಪರಿಚಿತ ಮನೋಜ್ ಕುಮಾರ್ ಎಂಬುವನನ್ನು ಪೊಲೀಸರು ವಶಕ್ಕೆ ಪಡೆದು ತನಿಖೆ ಕೈಗೊಂಡಿದ್ದಾರೆ. ಘಟನೆಗೆ ಹಳೇ ವೈಷಮ್ಯ ಕಾರಣ ಎಂದು ಪೊಲೀಸರ ಪ್ರಾಥಮಿಕ ತನಿಖೆ ವೇಳೆ ಬಯಲಾಗಿದೆ.