ಚಲಿಸುತ್ತಿದ್ದ ರೈಲು ಹತ್ತಲು ಹೋಗಿ ತಂದೆ-ಮಗ ಸಾವು

ಚಲಿಸುತ್ತಿದ್ದ ರೈಲು ಹತ್ತಲು ಹೋಗಿ ತಂದೆ-ಮಗ ಸಾವು

ಶಿವಮೊಗ್ಗ:ಚಲಿಸುತ್ತಿದ್ದ ರೈಲು ಹತ್ತಲು ಹೋಗಿ ಪ್ಲಾಟ್ ಫಾರಂನಿಂದ ಕೆಳಗೆ ಬಿದ್ದು ತಂದೆ, ಮಗ ಮೃತಪಟ್ಟ ಘಟನೆ ಭದ್ರಾವತಿ ರೈಲ್ವೆ ನಿಲ್ದಾಣದ ಪ್ಲಾಟ್ ಫಾರಂ 1 ರಲ್ಲಿ ಘಟನೆ ನಡೆದಿದೆ.

ತಾಳಗುಪ್ಪ - ಬೆಂಗಳೂರು - ಮೈಸೂರು ಎಕ್ಸ್ ಪ್ರೆಸ್ ರೈಲಿಗೆ ಸಿಲುಕಿದ ಇವರಿಬ್ಬರು ಸಾವನಪ್ಪಿದ್ದಾರೆ. ಭಾನುವಾರ ರಾತ್ರಿ ರೈಲು ಹತ್ತುವಾಗ ಕಾಲು ಜಾರಿ ಬಿದ್ದು ಘಟನೆ ನಡೆದಿದೆ.

ಮೋಹನ್ ಪ್ರಸಾದ್ (70 ) ಮತ್ತು ಅಮರನಾಥ್ (30 ) ಮೃತರು. ತಂದೆ ಮತ್ತು ಮಗ ರಾತ್ರಿ ರೈಲಿನಲ್ಲಿ ಬೆಂಗಳೂರಿಗೆ ತೆರಳಬೇಕಿತ್ತು. ನಿಲ್ದಾಣಕ್ಕೆ ಬಂದಾಗ ರೈಲು ಹೊರಟಿತ್ತು. ಚಲಿಸುತ್ತಿದ್ದ ರೈಲು ಹತ್ತಲು ಹೋಗಿ ಮಗ ಅಮರನಾಥ್ ಕಾಲು ಜಾರಿ ಕೆಳಗೆ ಬಿದ್ದಿದ್ದಾನೆ. ಆತನ ರಕ್ಷಣೆಗೆ ಧಾವಿಸಿದ ಮೋಹನ್ ಪ್ರಸಾದ್ ಅವರು ರೈಲಿನ ಅಡಿಗೆ ಸಿಲುಕಿದ್ದಾರೆ.

ಮೋಹನ್ ಪ್ರಸಾದ್ ಅವರು ವಿಐಎಸ್‌ಎಲ್ ನಿವೃತ್ತ ನೌಕರರಾಗಿದ್ದು, ಬೆಂಗಳೂರಿನಲ್ಲಿ ನೆಲೆಸಿದ್ದರು. ಭದ್ರಾವತಿಯಲ್ಲಿರುವ ಮಗನ ಮನೆಗೆ ಬಂದಿದ್ದರು.