ಚೈತ್ರಾ ಕುಂದಾಪುರ ಸಿಸಿಬಿ ಕಸ್ಟಡಿಗೆ

ಚೈತ್ರಾ ಕುಂದಾಪುರ ಸಿಸಿಬಿ ಕಸ್ಟಡಿಗೆ

ಬೆಂಗಳೂರು,ಸೆ.13: ಉಡುಪಿ ಜಿಲ್ಲೆಯ ಬೈಂದೂರು ಕ್ಷೇತ್ರದ ಬಿಜೆಪಿ ಟಿಕೆಟ್ ನೀಡುವುದಾಗಿ ನಂಬಿಸಿ ಉದ್ಯಮಿ ಗೋವಿಂದ ಬಾಬು ಪೂಜಾರಿ ಎಂಬುವವರಿಗೆ ಕೋಟ್ಯಂತರ ರೂಪಾಯಿ ವಂಚಿಸಿದ ಪ್ರಕರಣಕ್ಕೆ ಸಂಬಂಸಿದಂತೆ ಹಿಂದೂ ಕಾರ್ಯಕರ್ತೆ ಚೈತ್ರಾ ಕುಂದಾಪುರ ಸೇರಿದಂತೆ ಆರು ಆರೋಪಿಗಳನ್ನು ಸೆಪ್ಟೆಂಬರ್ 23 ರವರೆಗೆ ಸಿಸಿಬಿ ಕಸ್ಟಡಿಗೆ ಆದೇಶಿಸಲಾಗಿದೆ.

ಪ್ರಕರಣ ಸಂಬಂಧ ಕರಾವಳಿ ಮೂಲದ ಹಿಂದೂ ಕಾರ್ಯಕರ್ತೆ ಚೈತ್ರಾ ಕುಂದಾಪುರ ಸೇರಿದಂತೆ ಶ್ರೀಕಾಂತ್, ರಮೇಶ್, ಗಗನ್, ಪ್ರಜ್ವಲ್, ಧನರಾಜ್ ನನ್ನು ಬಂಸಿದ್ದ ಬೆಂಗಳೂರು ಸಿಸಿಬಿ ಪೊಲೀಸರು ಬಂಸಿದ್ದು ಇಂದು ಬೆಂಗಳೂರಿನ 1 ನೇ ಎಸಿಎಂಎಂ ಕೋರ್ಟ್‌ಗೆ ಹಾಜರುಪಡಿಸಿತ್ತು. 

ಈ ವೇಳೆ ಆರೋಪಿಗಳನ್ನು 14  ದಿನಗಳ ಕಾಲ ಸಿಸಿಬಿ ಕಸ್ಟಡಿಗೆ ನೀಡುವಂತೆ ಪೊಲೀಸರು ಮನವಿ ಮಾಡಿದರು.

ಆದರೆ ಕೋರ್ಟ್ ಆರು ಮಂದಿ ಆರೋಪಿಗಳಿಗೂ 10 ದಿನಗಳ ಕಾಲ ಸಿಸಿಬಿ ಕಸ್ಟಡಿಗೆ ನೀಡಿದೆ.  

ಆರೋಪಿಗಳು ಉದ್ಯಮಿ ಗೋವಿಂದ ಬಾಬು ಪೂಜಾರಿಗೆ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ೫ ಕೋಟಿ ರೂ. ಪಡೆದು ವಂಚಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಚೈತ್ರಾ ಕುಂದಾಪುರ ಬಲಪಂಥೀಯ ಕಾರ್ಯಕರ್ತರು ಮತ್ತು ಹಿಂದುತ್ವವಾದಿಗಳಲ್ಲಿ ಜನಪ್ರಿಯರಾಗಿದ್ದಾರೆ. ಪ್ರಚೋದಕ ಭಾಷಣಗಳಿಗೆ ಸಂಬಂಸಿದಂತೆ ಅವರು ಹಲವಾರು ಪ್ರಕರಣಗಳನ್ನು ಎದುರಿಸುತ್ತಿದ್ದಾರೆ. ಇದೀಗ ಸಿಸಿಬಿ ಪೊಲೀಸರು ವಿಚಾರಣೆ ನಡೆಸಲಾಗುತ್ತಿದ್ದು, ಬೆಂಗಳೂರಿಗೆ ಕರೆದೊಯ್ದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.