ಡಿಕೆಶಿ ವಿರುದ್ಧ ನಾಲಿಗೆ ಹರಿಬಿಟ್ಟ ಈಶ್ವರಪ್ಪ ಪ್ರತಿಕೃತಿ ದಹನ

ಡಿಕೆಶಿ ವಿರುದ್ಧ ನಾಲಿಗೆ ಹರಿಬಿಟ್ಟ ಈಶ್ವರಪ್ಪ ಪ್ರತಿಕೃತಿ ದಹನ
ಶಿವಮೊಗ್ಗ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ವಿರುದ್ಧ ಬೇಕಾಬಿಟ್ಟಿಯಾಗಿ ನಾಲಿಗೆ ಹರಿಬಿಟ್ಟಿರುವ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಜಿಲ್ಲಾ ಕಾಂಗ್ರೆಸ್ ಸಮಿತಿ ಇಂದು ಮಹಾವೀರ ವೃತ್ತದಲ್ಲಿ ಪ್ರತಿಭಟನೆ ನಡೆಸಿ ಪ್ರತಿಕೃತಿ ದಹನ ಮಾಡಲಾಯಿತು.
ಡಿ.ಕೆ. ಶಿವಕುಮಾರ್ ಅವರ ವಿರುದ್ಧ ಬೇಕಾಬಿಟ್ಟಿಯಾಗಿ ನಾಲಿಗೆ ಹರಿಬಿಟ್ಟಿದ್ದಲ್ಲದೇ ಸೌಜನ್ಯವೂ ಇಲ್ಲದೇ, ಡಿ.ಕೆ. ಶಿವಕುಮಾರ್ ಅವರನ್ನು ಇಡಿ ಕೇಸ್ ಪ್ರಕರಣದಲ್ಲಿ ಕಳ್ಳನಿಗೆ ಹೋಲಿಸಿ, ನಿಂದಿಸಿ ಅವಮಾನ ಮಾಡಿದ್ದಾರೆ. ಶಾಸಕ ಕೆ.ಎಸ್. ಈಶ್ವರಪ್ಪ ವಿರುದ್ಧ ಪ್ರಕರಣ ದಾಖಲಿಸಿ ಬಂಧಿಸುವಂತೆ ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್. ಸುಂದರೇಶ್, ಮಾಜಿ ಶಾಸಕರಾದ ಆರ್. ಪ್ರಸನ್ನಕುಮಾರ್, ಕೆ.ಬಿ. ಪ್ರಸನ್ನಕುಮಾರ್, ಪ್ರಮುಖರಾದ ಕಲಗೋಡು ರತ್ನಾಕರ್, ವೈ.ಹೆಚ್. ನಾಗರಾಜ್, ರಮೇಶ್ ಶಂಕರಘಟ್ಟ,, ಜಿ.ಡಿ.ಮಂಜುನಾಥ್, ಚಂದ್ರಭೂಪಾಲ್, ವಿಜಯಕುಮಾರ್, ರೇಖಾ ರಂಗನಾಥ್, ಮಧೂಸೂದನ್, ಹೆಚ್.ಪಿ. ಗಿರೀಶ್, ಕೆ. ಚೇತನ್, ಕೆ. ರಂಗನಾಥ್, ಮೋಹನ್, ಅನಿತಾ ಕುಮಾರಿ, ಯಮುನಾ ರಂಗೇಗೌಡ, ಸ್ಟೆಲಾ ಮಾರ್ಟಿನ್ ಮೊದಲಾದವರಿದ್ದರು.