ತೀರ್ಥಹಳ್ಳಿ: ಕಾರು- ಕ್ಯಾಂಟರ್ ಡಿಕ್ಕಿ

ಮೂವರು ವಿದ್ಯಾರ್ಥಿಗಳಿಗೆ ಗಂಭೀರ ಗಾಯ.

ತೀರ್ಥಹಳ್ಳಿ:  ಕಾರು- ಕ್ಯಾಂಟರ್ ಡಿಕ್ಕಿ

ತೀರ್ಥಹಳ್ಳಿ: ಇಲ್ಲಿನ  ಪ್ರತಿಷ್ಠಿತ ಕಾಲೇಜು ವಿದ್ಯಾರ್ಥಿಗಳು ಬುಧವಾರ ರಾತ್ರಿ ತೀರ್ಥಹಳ್ಳಿಯಿಂದ ಶಿವಮೊಗ್ಗ ಕಡೆಗೆ ಕಾರಿನಲ್ಲಿ ಹೋಗುತ್ತಿರುವಾಗ ಪಟ್ಟಣ ಸಮೀಪದ ತುಡ್ಕಿಯಲ್ಲಿ  ಕ್ಯಾಂಟರ್ ಗೆ ಡಿಕ್ಕಿ ಹೊಡೆದಿದೆ. 

ಈ ಪರಿಣಾಮ ಮೂವರು ವಿದ್ಯಾರ್ಥಿಗಳ ಸ್ಥಿತಿ ಗಂಭೀರವಾಗಿದೆ. ಮಣಿಪಾಲ ಮತ್ತು ಉಡುಪಿಯ ಆದರ್ಶ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.

ಪ್ರತಿಷ್ಠಿತ ಕಾಲೇಜು ವಿದ್ಯಾರ್ಥಿಗಳಾದ ಪ್ರಥಮ್, ಶ್ರೇಯಸ್, ಪ್ರತೀಕ್ ಮೂವರನ್ನು ಜೆಸಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಇಬ್ಬರನ್ನು ಮಣಿಪಾಲ ಆಸ್ಪತ್ರೆಗೆ ಓರ್ವನನ್ನು ಉಡುಪಿಯ ಆದರ್ಶ ಆಸ್ಪತ್ರೆಗೆ ಸೇರಿಸಲಾಗಿದೆ. ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.