ನಾಳೆಯಿಂದ ಶಿವಮೊಗ್ಗ ವಿಮಾನಯಾನ: ಪಾಟೀಲ್

ನಾಳೆಯಿಂದ ಶಿವಮೊಗ್ಗ ವಿಮಾನಯಾನ: ಪಾಟೀಲ್

ಬೆಂಗಳೂರು,ಆ.29 : ಶಿವಮೊಗ್ಗದಲ್ಲಿ ರಾಜ್ಯ ಸರ್ಕಾರದಿಂದ ನೂತನವಾಗಿ ನಿರ್ಮಿಸ ಲಾಗಿರುವ ವಿಮಾನ ನಿಲ್ದಾಣದಿಂದ ವಿಮಾನ ಯಾನ ಸೇವೆಗಳು ಗುರುವಾರದಿಂದ (ಆ.31 ) ಆರಂಭವಾಗಲಿವೆ.

ಈ ಮೂಲಕ ಮಲೆನಾಡು ಮತ್ತು ಮಧ್ಯ ಕರ್ನಾಟಕದ ಜಿಲ್ಲೆಗಳ ಆರ್ಥಿಕ, ಕೈಗಾರಿಕಾ ಮತ್ತು ಶೈಕ್ಷಣಿಕ ಬೆಳವಣಿಗೆ ಹೊಸ ಎತ್ತರಕ್ಕೇರಲಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲ ಸೌಕರ್ಯ ಅಭಿವೃದ್ಧಿ ಸಚಿವ ಎಂಬಿ ಪಾಟೀಲ್ ಮಂಗಳವಾರ ತಿಳಿಸಿದ್ದಾರೆ.

ಈ ಬಗ್ಗೆ ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಇಂಡಿಗೋ ಸಂಸ್ಥೆಯ ವಿಮಾನವು ಗುರುವಾರ ಬೆಳಿಗ್ಗೆ 9.50 ಕ್ಕೆ ಬೆಂಗಳೂರಿನ ಕೆಂಪೇಗೌಡ ಅಂತರ ರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೊರಟು 11.05 ಕ್ಕೆ ಶಿವಮೊಗ್ಗ ತಲು ಪಲಿದೆ. ಆರಂಭವಾಗಲಿರುವ ಮೊದಲ ಸೇವೆಯಲ್ಲಿ ತಾವೂ ಪ್ರಯಾಣಿಸಲಿದ್ದು, ಜೊತೆಯಲ್ಲಿ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ, ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಶಿವಮೊಗ್ಗ ಸಂಸದ ಬಿವೈ ರಾಘವೇಂದ್ರ ಸೇರಿದಂತೆ ಮಲೆನಾಡು ಭಾಗದ ಜನಪ್ರತಿನಿಗಳೂ ಇರಲಿ ದ್ದಾರೆ.

ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಇಳಿದೊಡನೆಯೇ ವಾಟರ್ ಸೆಲ್ಯೂಟ್ ಮೂಲಕ ಸಂಭ್ರಮಾಚರಿಸಲಾಗುವುದು ಎಂದಿದ್ದಾರೆ.