ಪತ್ರಕರ್ತ ಅಲೀಂ ನಿಧನ: ಸಂತಾಪ

ಪತ್ರಕರ್ತ ಅಲೀಂ ನಿಧನ: ಸಂತಾಪ

ಶಿವಮೊಗ್ಗ,ನ,24 : ನಗರದ ಹಿರಿಯ ಪತ್ರಕರ್ತ ಸಯ್ಯದ್ ಅಲೀಂ (60 ) ಗುರುವಾರ ಮಧ್ಯಾಹ್ನ ನಿಧನರಾದರು. ಕೆಲವು ತಿಂಗಳುಗಳಿಂದ ಅನಾರೋಗ್ಯದಿಂದ ಬಳಲುತಿದ್ದು ಅವರು, ಸ್ವಂತ ಊರಾದ ಕುಮಟಾದಲ್ಲಿ  ಕೊನೆಯುಸಿರೆಳೆದಿದ್ದಾರೆ.

ಮೃತರು ಪತ್ನಿ ಹಾಗೂ ಒಬ್ಬ ಪುತ್ರ ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

ಸಂತಾಪ:

  ಅಲೀಂ ಅವರ ನಿಧನಕ್ಕೆ ಶಿವಮೊಗ್ಗ ಪ್ರೆಸ್ ಟ್ರಸ್ಟ್ ಹಾಗೂ ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ತೀವ್ರ ಸಂತಾಪ ವ್ಯಕ್ತಪಡಿಸಿದೆ. ಶಿವಮೊಗ್ಗ ಪತ್ರಿಕಾ ಭವನದಲ್ಲಿ ನಡೆದ ಸಂತಾಪ ಸಭೆಯಲ್ಲಿ ಟ್ರಸ್ಟ್ ಅಧ್ಯಕ್ಷ ಎನ್.ಮಂಜುನಾಥ್, ಪತ್ರಕರ್ತರ ಸಂಘದ ಅಧ್ಯಕ್ಷ ಗೋಪಾಲ್ ಎಸ್ ಯಡಗೆರೆ, ಹಿರಿಯ ಪತ್ರಕರ್ತರಾದ ಶೃಂಗೇಶ್, ನಾಗರಾಜ್ ನೇರಿಗೆ, ಸಂತೋಷ್ ಕಾಚಿನಕಟ್ಟೆ, ಸೂರ್ಯನಾರಾಯಣ್, ಗಿರೀಶ್ ಉಮ್ರಾಯ್, ಮಹೇಶ್,ವಿನಯ್ ತೇಕಲೆ ಮತ್ತಿತರರಿದ್ದರು. ಪತ್ರಕರ್ತ ವಿ.ಸಿ.ಪ್ರಸನ್ನ ಅವರು, ಅಲೀಂ ಅವರು ತಮ್ಮ ಸರಳ ಹಾಗೂ ಸ್ನೇಹಮಯಿ ವ್ಯಕ್ತಿತ್ವದಿಂದ ಎಲ್ಲರ ಪ್ರೀತಿಗಳಿಸಿದ್ದರು. ಅವರ ಅಗಲಿಕೆ ನೋವು ತಂದಿದೆ ಎಂದು ಹೇಳಿದರು. ಈ ಸಂದರ್ಭ ಒಂದು ನಿಮಿಷ ಮೌನಾಚರಣೆ ನಡೆಸಿ ಮೃತರ ಆತ್ಮಕ್ಕೆ ಶಾಂತಿಕೋರಲಾಯಿತು.