ಶಿಕಾರಿಪುರದ ಬಳಿಗಾರ್ ಶೀಘ್ರವೇ ಬಿಜೆಪಿಗೆ ಸೇರ್ಪಡೆ

ಶಿಕಾರಿಪುರದ ಬಳಿಗಾರ್ ಶೀಘ್ರವೇ ಬಿಜೆಪಿಗೆ ಸೇರ್ಪಡೆ

ಶಿವಮೊಗ್ಗ:  ಶಿಕಾರಿಪುರದ ಜೆಡಿಎಸ್ ಮುಖಂಡ ಹೆಚ್.ಟಿ ಬಳಿಗಾರ್ ಜೆಡಿಎಸ್  ತೊರೆದು ಬಿಜೆಪಿ ಸೇರುವುದುಆಗಿ ಹೇಳಿದ್ದಾರೆ.

 ಶೀಘ್ರದಲ್ಲೇ ಅವರು ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ.

ಈ ಬಗ್ಗೆ ಕ್ರಾಂತಿದೀಪದೊಂದಿಗೆ ಮಾತನಾಡಿದ್ದಾರೆ. ಬುಧವಾರ ತರೀಕೆರೆಯಲ್ಲಿ ನಡೆದ ಬಿಜೆಪಿ ಜನಸಂಕಲ್ಪ ಯಾತ್ರೆ ಸಮಯದಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಮತ್ತು ಮಾಜಿ ಮುಖ್ಯಮಂತ್ರಿ ಬಿ,ಎಸ್ ಯಡಿಯೂರಪ್ಪನವರು  ಬಳಿಗಾರ್ ಅವರನ್ನು ಕರೆಸಿಕೊಂಡು ಮಾತುಕತೆ ನಡೆಸಿದ್ದರು.

ದಿ.ಬಂಗಾರಪ್ಪ ಮತ್ತು ಮಾಜಿ ಶಾಸಕ ಮಧುಬಂಗಾರಪ್ಪನವರ ಆಪ್ತರಾಗಿದ್ದ ಬಳಿಗಾರ್ ಜೆಡಿಎಸ್ ಪಕ್ಷ ಸೇರ್ಪಡೆಯಾಗಿದ್ದರು.ಶಿಕಾರಿಪುರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿ  ಸ್ಪರ್ಧಿಸಿದ್ದರು.

ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಹೆಚ್,ಡಿ ಕುಮಾರ ಸ್ವಾಮಿ ಮುಖ್ಯಮಂತ್ರಿಯಾದ ಅವಧಿಯಲ್ಲಿ ಶಿಕಾರಿಪುರ ಕ್ಷೇತ್ರಕ್ಕೆ ನೀರಾವರಿ ಯೋಜನೆಗೆ ಹಣವನ್ನು ಬಿಡುಗಡೆ  ಮಾಡಿಸುವಲ್ಲಿ ಯಶಸ್ವಿಯಾಗಿದ್ದರು.

ಶಿವಮೊಗ್ಗದ ಬಿಜೆಪಿ ಕಚೇರಿಯಲ್ಲಿ ತಮ್ಮ ಅಪಾರ ಅಭಿಮಾನಿಗಳೊಂದಿಗೆ  ಬಳಿಗಾರ್  ಬಿಜೆಪಿ ಸೇರಲಿದ್ದಾರೆ.