ಸಂವಿಧಾನ ಪೀಠಿಕೆ ಓದಿಗೆ ಚಾಲನೆ

ಬೆಂಗಳೂರು,ಸೆ.15: ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ವಿಧಾನಸೌಧದ ಮುಂಭಾಗ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಆಯೋಜಿಸಿದ ‘ಸಂವಿಧಾನ ಪೀಠಿಕೆ ಓದು’ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಚಾಲನೆ ನೀಡಿದರು.
ನಂತರ ಮಾತನಾಡಿದ ಮುಖ್ಯಮಂತ್ರಿ, ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವದ ಉದಾತ್ತ ಚಿಂತನೆಗಳನ್ನು ಸಾರುವ ನಮ್ಮ ಸಂವಿಧಾನ ನಮ್ಮ ಹೆಮ್ಮೆ. ಸಂವಿಧಾನವನ್ನು ರಚಿಸಿದ ಅಂಬೇಡ್ಕರ್ ಅವರನ್ನು ನೆನಪಿಸಿ ಕೊಳ್ಳುವ ದಿನವಿದು, ಅವರ ಆಶಯಗಳನ್ನು ಪ್ರತಿಯೊಬ್ಬರು ಅನುಸರಿಸಬೇಕು ಎಂದರು.
ಈ ಲಿಂಕ್ ಅನ್ನು ಕ್ಲಿಕ್ ಮಾಡಿ http://www.krantideepa.com/
ಸಂವಿಧಾನ ವಿರೋ ಶಕ್ತಿಗಳು ಸಂವಿಧಾನ ವನ್ನು ನಾಶಗೊಳಿಸಿ ಮತ್ತೆ ಮನುಸ್ಮೃತಿ ಜಾರಿಗೆ ಹುನ್ನಾರ ನಡೆಸುತ್ತಿವೆ. ಈ ಬಗ್ಗೆ ಎಚ್ಚರ ಮತ್ತು ಜಾಗೃತಿ ಇರಬೇಕು. ಸಂವಿಧಾನದ ನಾಶ ಮತ್ತು ಮನುಸ್ಮೃತಿಯ ಜಾರಿ ಎಂದರೆ ಶೇ.90 ರಷ್ಟು ಭಾರತೀಯರನ್ನು ಮತ್ತೆ ಗುಲಾಮಗಿರಿಗೆ ತಳ್ಳುವುದಾಗಿದೆ. ಇದಕ್ಕಾಗಿ ಬಹಳ ಕುತಂತ್ರ ಗಳು ನಡೆಯುತ್ತಿವೆ ಎಂದು ಎಚ್ಚರಿಸಿದರು.
We the people of India ಎನ್ನುವ ಮೂಲಕವೇ ನಮ್ಮ ಸಂವಿಧಾನ ತೆರೆದುಕೊಳ್ಳುತ್ತದೆ. ಸಂವಿಧಾನದ ಆಶಯ ಗಳನ್ನು ಪರಿಣಾಮಕಾರಿಯಾಗಿ ಅರ್ಥೈಸಿ ಕೊಂಡು ಪಾಲಿಸದಿದ್ದರೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ. ಸಂವಿಧಾನದ ಸಮ ಸಮಾಜ ಮತ್ತು ಜಾತ್ಯತೀತ ತತ್ವದ ಆಶಯಗಳಂತೆಯೇ ನಮ್ಮ ಸರ್ಕಾರ ಸರ್ವರ ಏಳಿಗೆಯ ಕಾರ್ಯಕ್ರಮಗಳನ್ನು ಜಾರಿ ಮಾಡಿದೆ. ಜನರ ಹಣವನ್ನು ಮತ್ತೆ ಜನರ ಬದುಕಿಗೇ ಮರಳಿಸುವುದು ನಮ್ಮ ಕಾರ್ಯಕ್ರಮಗಳ ಉದ್ದೇಶವಾಗಿದೆ ಎಂದರು.
ಪೊಲೀಸರು ದರ್ಪಬಿಟ್ಟು ಜನಸ್ನೇಹಿ ಸೇವೆ ಕೆಲಸ ಮಾಡಬೇಕು. ಠಾಣೆಗೆ ಬರುವ ಜನರ ಜೊತೆಗೆ ಸೌಜನ್ಯ, ಗೌರವದಿಂದ ನಡೆದುಕೊಂಡು ಧೈರ್ಯ ತುಂಬಿ ಪ್ರಮಾಣಿಕವಾಗಿ ಅವರ ಸಮಸ್ಯೆಯನ್ನು ಬಗೆಹರಿಸಬೇಕು.
-ಮುಖ್ಯಮಂತ್ರಿ ಸಿದ್ದರಾಮಯ್ಯ, (ರಾಜ್ಯ ಹಿರಿಯ ಪೊಲೀಸ್ ಅಕಾರಿಗಳ ವಾರ್ಷಿಕ ಸಭೆಯಲ್ಲಿ)