ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ

ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ
ಕೊಪ್ಪಳ, ನ.21:ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಜಿಲ್ಲಾ ಶಾಖೆ, ಕೊಪ್ಪಳ ವತಿಯಿಂದ ಏರ್ಪಡಿಸಲಾಗಿದ್ದ ಪ್ರತಿಭಾ ಪುರಸ್ಕಾರ ಹಾಗೂ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ  ರಾಜ್ಯಾಧ್ಯಕ್ಷರಾದ ಶ್ರೀ ಸಿ.ಎಸ್.ಷಡಾಕ್ಷರಿರವರು ಭಾಗವಹಿಸಿ, ಪ್ರತಿಭಾನ್ವಿತ ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರಗಳನ್ನು ವಿತರಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾಧ್ಯಕ್ಷರಾದ ನಾಗರಾಜ ಜುಮ್ಮನ್ನವರ ವಹಿಸಿದ್ದರು.
ವಿಧಾನ ಪರಿಷತ್ ಸದಸ್ಯರಾದ ಶ್ರೀಮತಿ ಹೇಮಲತಾ ನಾಯಕ ಹಾಗೂ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷರಾದ ಶಂಭುಲಿಂಗನಗೌಡ ಪಾಟೀಲರವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಕೇಂದ್ರ ಸಂಘದ ಪದಾಧಿಕಾರಿಗಳಾದ ಮಲ್ಲಿಕಾರ್ಜುನ ಬಳ್ಳಾರಿ, ಎಂ.ವಿ.ರುದ್ರಪ್ಪ, ಮೋಹನ್ ಕುಮಾರ್, ನೆಲ್ಕುದ್ರಿ ಸದಾನಂದ, ಧಾರವಾಡ ಜಿಲ್ಲಾಧ್ಯಕ್ಷರಾದ ಎಸ್.ಎಫ್.ಸಿದ್ದನಗೌಡ, ಗಂಗಾವತಿ ತಾಲೂಕು ಶಾಖೆಯ ಅಧ್ಯಕ್ಷರು ಹಾಗೂ ಕೊಪ್ಪಳ ಜಿಲ್ಲಾ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಶರಣೇಗೌಡ ಪೊಲೀಸ್ ಪಾಟೀಲ ಹಾಗೂ ಜಿಲ್ಲಾ/ತಾಲ್ಲೂಕು ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.