ಹಂಸಲೇಖರಿಂದ ದಸರಾ ಉದ್ಘಾಟನೆ

ಹಂಸಲೇಖರಿಂದ ದಸರಾ ಉದ್ಘಾಟನೆ

ಮೈಸೂರು,ಆ.29: ಮೈಸೂರು ದಸರಾ ಉತ್ಸವವನ್ನು ಸಂಗೀತ ನಿರ್ದೇಶಕ ಹಂಸಲೇಖ ಉದ್ಘಾಟಿಸಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ನಗರದ ಚಾಮುಂಡಿ ಬೆಟ್ಟದಲ್ಲಿ ಮಂಗಳವಾರ ಪತ್ರಕರ್ತರ ಜೊತೆ ಅವರು ಮಾತನಾಡಿ, ಈ ವಿಷಯ ತಿಳಿಸಿದರು. ಹಂಸಲೇಖ ಅವರು ನಾಡಿನ ಖ್ಯಾತ ಸಂಗೀತ ನಿರ್ದೇಶಕ ಮತ್ತು ಗೀತ ರಚನೆಕಾರರಾಗಿದ್ದಾರೆ.