3 ನೇ ಸ್ಥಾನಕ್ಕೆ ಶುಭಮನ್

ದುಬೈ,ಸೆ.6: ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ಬಿಡುಗಡೆ ಮಾಡಿರುವ ಏಕದಿನ ಬ್ಯಾಟರ್‌ಗಳ ರ್‍ಯಾಂಕಿಂಗ್ ಪಟ್ಟಿಯಲ್ಲಿ ಭಾರತದ ಶುಭಮನ್ ಗಿಲ್ ಮೂರನೇ ಸ್ಥಾನಕ್ಕೆ ಲಗ್ಗೆ ಇಟ್ಟಿದ್ದಾರೆ.
ಈ ಮೂಲಕ ಟೀಮ್ ಇಂಡಿ ಯಾದ ಬಲಗೈ ಆರಂಭಿಕ ಬ್ಯಾಟರ್ ಗಿಲ್, ಜೀವನಶ್ರೇಷ್ಠ ಸಾಧನೆ ಮಾಡಿದ್ದಾರೆ. ಏಕದಿನ ಬ್ಯಾಟರ್‌ಗಳ ರ್‍ಯಾಂಕಿಂಗ್ ಪಟ್ಟಿಯಲ್ಲಿ ಪಾಕಿಸ್ತಾನದ ನಾಯಕ ಬಾಬರ್ ಆಜಂ ಅಗ್ರಸ್ಥಾನದಲ್ಲಿದ್ದು, ದಕ್ಷಿಣ ಆಫ್ರಿಕಾದ ರಸ್ಸಿ ವಾನ್ ಡರ್ ದುಸಾನ್ ಎರಡನೇ ಸ್ಥಾನದಲ್ಲಿದ್ದಾರೆ.
ಬಾಬರ್ 882 , ದುಸ್ಸಾನ್ 777 ಮತ್ತು ಗಿಲ್ 750 ರೇಟಿಂಗ್ ಪಾಯಿಂಟ್‌ಗಳನ್ನು ಹೊಂದಿದ್ದಾರೆ. 695 ರೇಟಿಂಗ್ ಪಾಯಿಂಟ್ ಹೊಂದಿರುವ ಮಾಜಿ ನಾಯಕ ವಿರಾಟ್ ಕೊಹ್ಲಿ 10 ನೇ ಸ್ಥಾನದಲ್ಲಿದ್ದಾರೆ.