ಜೆಡಿಎಸ್ ತೊರೆದ ಎಂ. ಶ್ರೀಕಾಂತ್ ಕಾಂಗ್ರೆಸ್ ಸೇರ್ಪಡೆ

ಜೆಡಿಎಸ್ ತೊರೆದ ಎಂ. ಶ್ರೀಕಾಂತ್ ಕಾಂಗ್ರೆಸ್ ಸೇರ್ಪಡೆ

ಬೆಂಗಳೂರು,ಅ.25 : ಬಿಜೆಪಿ ಮೈತ್ರಿ ಕರ್ನಾಟಕಕ್ಕೆ ಮಾತ್ರ ಎಂದು ಕುಮಾರಣ್ಣ ಹೇಳುತ್ತಿದ್ದಾರೆ. ಆ ಪಕ್ಷದ (ಜೆಡಿಎಸ್) ರಾಷ್ಟ್ರೀಯ ಅಧ್ಯಕ್ಷರು ಕೇರಳಕ್ಕೆ ಒಂದು ಭಾಗ, ಕರ್ನಾಟಕಕ್ಕೆ ಒಂದು ಭಾಗ ಎಂದು ಹೇಗೆ ಮಾಡುತ್ತಾರೋ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವ್ಯಂಗ್ಯವಾಡಿದರು.

ಕೆಪಿಸಿಸಿ ಕಚೇರಿಯಲ್ಲಿ ಶಿವಮೊಗ್ಗದ ಜೆಡಿಎಸ್ ಜಿಲ್ಲಾ ಮುಖಂಡ ಶ್ರೀಕಾಂತ್ ಸೇರಿದಂತೆ ಅನ್ಯಪಕ್ಷಗಳ ಹಲವು ಮುಖಂಡರನ್ನು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡ ಬಳಿಕ ಅವರು ಮಾತನಾಡಿದರು.

ಶ್ರೀಕಾಂತ್ ನನ್ನ ಹಳೆಯ ಗೆಳೆಯ. ಒಳ್ಳೆಯ ಸಂಘಟನಾ ಚತುರ. ಬಹಳ ಕಾಲದಿಂದ ಗಾಳ ಹಾಕುತ್ತಲೇ ಇದ್ದೆ. ಆದರೆ, ಬಲೆಗೆ ಬಿದ್ದಿರಲಿಲ್ಲ. ಈತನಿಗೆ ಸಾಕಷ್ಟು ಆಶ್ವಾಸನೆ ನೀಡಿದ್ದೆವು. ಅದನ್ನು ಬಹಿರಂಗ ವಾಗಿ ಹೇಳಲು ಆಗುವುದಿಲ್ಲ. ಬದುಕಿನಲ್ಲಿ ಏನಾದರೂ ಸಾಧನೆ ಮಾಡಬೇಕು ಎಂದು ಶಿವಮೊಗ್ಗ, ಬೆಂಗಳೂರಿನಲ್ಲಿ ವಿಧಾನಸಭೆ ಚುನಾವಣೆಗೆ ರ್ಸ್ಪಸಿದ್ದರು. ಶ್ರೀಕಾಂತ್ ಅವರಿಗೆ ನಾಯಕರನ್ನು ಸೃಷ್ಟಿಮಾಡುವ ದೊಡ್ಡ ಶಕ್ತಿಯಿದೆ’ ಎಂದರು.

ಪಕ್ಷಕ್ಕೆ ಮರಳಿರುವ ತುಮಕೂರಿನ ಶಫಿ ಅಹ್ಮದ್ ಅವರು ಈ ಹಿಂದೆ ದುಡುಕಿನ ನಿರ್ಧಾರ ಯಾಕೆ ತೆಗೆದುಕೊಂಡಿದ್ದರೊ ಗೊತ್ತಿಲ್ಲ, ಮತ್ತೆ ಅವರನ್ನು ಪಕ್ಷಕ್ಕೆ ಆಹ್ವಾನ ಮಾಡುತ್ತಿದ್ದೇವೆ. ಶಫಿ ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳಲು ಖುದ್ದಾಗಿ ಪರಮೇಶ್ವರ ಅವರೇ ಬರುತ್ತೇನೆ ಎಂದು ಹೇಳಿದ್ದರು. ದಸರಾಗೆ ದುಡಿದ ಪೊಲೀಸರಿಗೆ ಅಭಿನಂದನಾ ಸಮಾರಂಭ ಇದ್ದ ಕಾರಣ ಬರಲಾಗಲಿಲ್ಲ. ಮುಖ್ಯಮಂತ್ರಿ ಕೂಡಾ ಈ ಕಾರ್ಯಕ್ರಮಕ್ಕೆ ಬರಬೇಕಾಗಿತ್ತು, ಕೊನೆ ಕ್ಷಣದಲ್ಲಿ ಬೇರೆ ಕಾರ್ಯಕ್ರಮ ನಿಗದಿಯಾದ ಕಾರಣ ಬರಲಾಗಲಿಲ್ಲ. ಎಂದರು.

ಪಕ್ಷಕ್ಕೆ ಬಂದಿರುವ ಒಬ್ಬೊಬ್ಬ ನಾಯಕರು, ಕಾರ್ಯಕರ್ತರು ಕನಿಷ್ಠ ೧೦ ಜನರನ್ನು ಪಕ್ಷಕ್ಕೆ ಸೇರಿಸಿಕೊಳ್ಳಬೇಕು. ಕಾಂಗ್ರೆಸ್ ಪಕ್ಷವೇ ಈ ದೇಶದ ಶಕ್ತಿ, ಕಾಂಗ್ರೆಸ್ ಇತಿಹಾಸ ಈ ದೇಶದ ಇತಿಹಾಸ, ಎಲ್ಲರೂ ಸೇರಿ ಮತ್ತಷ್ಟು ಪಕ್ಷವನ್ನು ಬಲಪಡಿಸೋಣ. ಇತರರನ್ನು ಪಕ್ಷಕ್ಕೆ ಸೇರಿಸಿಕೊಳ್ಳುವ ಕೆಲಸವನ್ನು ಬೆಂಗಳೂರಿಗೆ ಬಂದು ಮಾಡಬೇಕಾಗಿಲ್ಲ, ನೀವು ಇರುವ ಸ್ಥಳಗಳಲ್ಲೇ ಈ ಕೆಲಸ ಮಾಡಬೇಕು ಎಂದರು.

ಎಂ.ಶ್ರೀಕಾಂತ್ ಅವರು ಶಿವಮೊಗ್ಗ ಜಿಲ್ಲೆಯಲ್ಲಿ ಎರಡು ದಶಕಗಳಿಗೂ ಅಕ ಕಾಲ ಜೆಡಿಎಸ್‌ಗೆ ದುಡಿದವರು. ಶೂನ್ಯ ಸ್ಥಿತಿಯಲ್ಲಿದ್ದ ಪಕ್ಷವನ್ನು ಕಟ್ಟಿದ್ದರು. ಶಿವಮೊಗ್ಗ ನಗರ ಕ್ಷೇತ್ರದಲ್ಲಿ ಎರಡು ಬಾರಿ ಚುನಾವಣೆಗೆ ರ್ಸ್ಪಸಿ ಗಣನೀಯ ಪ್ರಮಾಣದಲ್ಲಿ ಮತಗಳಿಸಿದ್ದರು. ಶಿವಮೊಗ್ಗ ಮಹಾನಗರ ಪಾಲಿಕೆ ಮತ್ತು ಜಿಲ್ಲಾ ಪಂಚಾಯಿತಿಯಲ್ಲಿ ಅಕಾರ ಹಂಚಿಕೆ ಮಾಡಿಕೊಳ್ಳುವಷ್ಟರ ಮಟ್ಟಿಗೆ ಜೆಡಿಎಸ್‌ಗೆ ಬಲ ತುಂಬಿದ್ದರು. ಎರಡು ದಶಕಗಳ ಕಾಲ ದುಡಿದರೂ ಪಕ್ಷ ಶ್ರೀಕಾಂತ್ ಅವರನ್ನು ಗುರುತಿಸಲಿಲ್ಲ. ಈಗ ಬದಲಾದ ಕಾಲಘಟ್ಟದಲ್ಲಿ ಜೆಡಿಎಸ್ ಜಿಲ್ಲೆಯಲ್ಲಿ ದುರ್ಬ ಲವಾ ಗಿದ್ದು, ವೈಯಕ್ತಿಕ ವರ್ಚಸ್ಸಿನಿಂದ ಗ್ರಾಮಾಂತರದಲ್ಲಿ ಒಬ್ಬರು ಶಾಸಕರು ಗೆದ್ದಿದ್ದಾರೆ. ಈಗ ಜೆಡಿಎಸ್‌ನಿಂದ ಹಲವು ನಾಯಕರು ಕಾಂಗ್ರೆಸ್‌ನತ್ತ ವಲಸೆ ಹೋಗುತ್ತಿದ್ದಾರೆ. ಎಂ.ಶ್ರೀಕಾಂತ್ ಅವರು ಮಾಜಿ ಮೇಯರ್ ಸೇರಿದಂತೆ ಹಲವು ಪ್ರಮುಖರೊಂದಿಗೆ ಕಾಂಗ್ರೆಸ್ ಪಕ್ಷ ಸೇರಿದ್ದು, ಚುನಾವಣೆ ಹೊತ್ತಲ್ಲಿ ಆ ಪಕ್ಷಕ್ಕೆ ಬಲ ತುಂಬಿದ್ದಾರೆ. 

ಕಾಂಗ್ರೆಸ್ ಸೇರ್ಪಡೆಗೊಂಡ ಶಿವಮೊಗ್ಗ ಜಿಲ್ಲಾ ಮಾಜಿ ಜೆಡಿಎಸ್ ಅಧ್ಯಕ್ಷ ಎಂ.ಶ್ರೀಕಾಂತ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕಾವೇರಿಯಲ್ಲಿ ಭೇಟಿಯಾದರು. ಮುಖ್ಯಮಂತ್ರಿಗಳು ಎಂ.ಶ್ರೀಕಾಂತ್ ಅವರಿಗೆ ಶುಭ ಹಾರೈಸಿದರು.

ಶ್ರೀಕಾಂತ್ ಆಗಮನದಿಂದ ಕಾಂಗ್ರೆಸ್‌ಗೆ ಬಲ

ಜಿಲ್ಲೆಯಾದ್ಯಂತ ಬೆಂಬಲಿಗರ ಸಂಪರ್ಕ ಜಾಲ ಹೊಂದಿರುವ ಶ್ರೀಕಾಂತ್ ಅವರು, ಸಂಘಟನಾ ಚತುರರು ಎಂದೇ ಹೆಸರು ಪಡೆದಿದ್ದಾರೆ. ಜಾತ್ಯತೀತ ಮನೋಭಾವ ಹೊಂದಿರುವ ಅವರಿಗೆ ಕಾಂಗ್ರೆಸ್‌ನಲ್ಲಿ ಹೊಂದಿಕೊಳ್ಳುವುದು ಕಷ್ಟವೇನು ಆಗುವುದಿಲ್ಲ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ನೇರ ಸಂಪರ್ಕ ಹೊಂದಿರುವ ಶ್ರೀಕಾಂತ್ ಅವರು ಜಿಲ್ಲಾ ಉಸ್ತುವಾರಿ ಸಚಿವ ಮಧುಬಂಗಾರಪ್ಪ ಅವರ ಆಪ್ತವಲಯದಲ್ಲಿದ್ದಾರೆ. ಕಾರ್ಯಕರ್ತರು ಮತ್ತು ಮುಖಂಡರನ್ನು ಒಗ್ಗೂಡಿಸಿ ವಿಶ್ವಾಸ ಗಳಿಸುವ ಸಾಮರ್ಥ್ಯ ಇರುವ ಅವರ ಪಕ್ಷ ಸೇರ್ಪಡೆ ಕಾಂಗ್ರೆಸ್‌ಗೆ ಮತ್ತಷ್ಟು ಶಕ್ತಿ ನೀಡಲಿದೆ.

ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಚಂದ್ರಪ್ಪ, ಸಲೀಂ ಅಹಮದ್, ಶಿಕ್ಷಣ ಸಚಿವ ಮಧು ಬಂಗಾರಪ್ಪ, ಗೀತಾ ಶಿವರಾಜ್ ಕುಮಾರ್, ಶಿವಮೊಗ್ಗ ಜಿಲ್ಲಾಧ್ಯಕ್ಷ ಹೆಚ್.ಎಸ್. ಸುಂದರೇಶ್, ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್.ಎಂ. ಮಂಜುನಾಥ ಗೌಡ , ಕಲಗೋಡು ರತ್ನಾಕರ ಉಪಸ್ಥಿತರಿದ್ದರು.