ಅಲೋಕ್ ಕುಮಾರ್ ವರ್ಗಾವಣೆ

ಅಲೋಕ್ ಕುಮಾರ್ ವರ್ಗಾವಣೆ

ಬೆಂಗಳೂರು,ಸೆ.29 : ಸಂಚಾರ ಮತ್ತು ರಸ್ತೆ ಸುರಕ್ಷತಾ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ಸೇರಿದಂತೆ ಇಬ್ಬರು ಐಪಿಎಸ್ ಅಕಾರಿಗಳನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿ ಶುಕ್ರವಾರ ಆದೇಶ ಹೊರಡಿಸಿದೆ.

ಎಡಿಜಿಪಿ ಅಲೋಕ್ ಕುಮಾರ್ ಅವರನ್ನು ಅಕ್ಟೋಬರ್ 1 ರಿಂದ ಜಾರಿಗೆ ಬರುವಂತೆ ಪೊಲೀಸ್ ತರಬೇತಿ ವಿಭಾಗದ ಎಡಿಜಿಪಿಯಾಗಿ ವರ್ಗಾವಣೆ ಮಾಡಲಾಗಿದೆ.

ಈ ಲಿಂಕ್ ಅನ್ನು ಕ್ಲಿಕ್ ಮಾಡಿ  http://www.krantideepa.com/

ಇನ್ನು ರಾಜ್ಯ ಪೊಲೀಸ್ ವಸತಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಹಾಗೂ ಎಡಿಜಿಪಿ ಡಾ.ಕೆ.ರಾಮಚಂದ್ರ ರಾವ್ ಅವರನ್ನು ಡಿಜಿಪಿ ಹುದ್ದೆಗೆ ಭಡ್ತಿ ನೀಡಿ ಪೊಲೀಸ್ ವಸತಿ ಹಾಗೂ ಮೂಲಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕರನ್ನಾಗಿ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.

ಅಲೋಕ್ ಕುಮಾರ್ ಅವರನ್ನು ಮೂರು ತಿಂಗಳ ಹಿಂದೆಯಷ್ಟೇ ಕಾನೂನು ಮತ್ತು ಸುವ್ಯವಸ್ಥೆಯಿಂದ ಸಂಚಾರ ಮತ್ತು ರಸ್ತೆ ಸುರಕ್ಷತಾ ವಿಭಾಗದ ಎಡಿಜಿಪಿಯಾಗಿ ವರ್ಗಾವಣೆ ಮಾಡಲಾಗಿತ್ತು. ಇದೀಗ ಮತ್ತೆ ವರ್ಗಾವಣೆ ಮಾಡಲಾಗಿದೆ.