ಆಹಾರ ತಜ್ಞ ಕೆ.ಸಿ.ರಘು ನಿಧನ

ಬೆಂಗಳೂರು,15 : ಖ್ಯಾತ ಆಹಾರ ತಜ್ಞ, ಚಿಂತಕ ಕೆ.ಸಿ.ರಘು ಅವರು ಅಲ್ಪಕಾಲದ ಅನಾರೋಗ್ಯದಿಂದ ಭಾನುವಾರ ಬೆಳಿಗ್ಗೆ ನಿಧನರಾಗಿದ್ದಾರೆ.
'ಶ್ವಾಸಕೋಶದ ಕ್ಯಾನ್ಸರ್‌ನಿಂದ ಬಳಲುತ್ತಿದ್ದ ನನ್ನ ಪತಿ ಕೆ.ಸಿ.ರಘು ಅವರು ಭಾನುವಾರ ಬೆಳಿಗ್ಗೆ 7.30 ಕ್ಕೆ ನಿಧನರಾಗಿದ್ದಾರೆ.
ಕೆ.ಸಿ. ರಘು ಅವರು ಹಲವು ವರ್ಷಗಳ ಕಾಲ ಫುಡ್ ಅಂಡ್ ನ್ಯೂಟ್ರೇಷನ್ ವರ್ಲ್ಡ್ ಎಂಬ ಆಂಗ್ಲ ನಿಯತಕಾಲಿಕದ ಸಂಪಾದಕರಾಗಿದ್ದರು. ಅನೇಕ ದಿನಪತ್ರಿಕೆಗಳಲ್ಲಿ ಅಂಕಣಗಳನ್ನು ಬರೆಯುತ್ತಿದ್ದರು. ಸಾಮಾನ್ಯ ವಿಜ್ಞಾನ ಮತ್ತು ಆರ್ಥಿಕತೆಯ ವಿಷಯಗಳನ್ನು ಅತಿಥಿ ಉಪನ್ಯಾಸಕರಾಗಿ ನಿರ್ವಹಿಸಿದ್ದಾರೆ.
ಈ ಲಿಂಕ್ ಅನ್ನು ಕ್ಲಿಕ್ ಮಾಡಿ http://www.krantideepa.com/
ಅವರು ಸ್ಥಾಪಿಸಿದ ಪ್ರಿಸ್ಟೀನ್ ಆರ್ಗ್ಯಾನಿಕ್ಸ್ ಎಂಬ ಸಂಸ್ಥೆಯಲ್ಲಿ ನವಜಾತ ಶಿಶುಗಳಲ್ಲಿ ಕಂಡುಬರುವ ಮಾರಕ ಕಾಯಿಲೆಗಳಿಗೆ ಪೌಷ್ಟಿಕಾಂಶದ ಪರಿಹಾರ ವನ್ನು ಸಂಶೋಧನೆಯಿಂದ ಕಂಡುಹಿಡಿದು, ದೇಶಾದ್ಯಂತ ಹಾಗೂ ವಿದೇಶಕ್ಕೂ ಒದಗಿಸು ತ್ತಿದ್ದರು. ಈ ಕಾರ್ಯದಿಂದ ಸುಮಾರು 5 ಸಾವಿರ ನವಜಾತ ಶಿಶುಗಳನ್ನು ಸಾವಿನ ದವಡೆಯಿಂದ ಪಾರು ಮಾಡಲಾಗಿತ್ತು.
ರಘು ಅವರಿಗೆ ಅನೇಕ ವಿಷಯಗಳಲ್ಲಿ ಆಳವಾದ ಜ್ಞಾನವಿತ್ತು. ಹೊಸ ವಿಷಯಗಳನ್ನು ಹುಡುಕುತ್ತಾ ಸದಾ ಅಧ್ಯಯನದಲ್ಲಿ ತೊಡಗಿಸಿಕೊಂಡಿದ್ದರು. ಅಧ್ಯಯನಕ್ಕಾಗಿಯೇ ಒಂದು ಬೃಹತ್ ಲೈಬ್ರರಿಯನ್ನೇ ತೆರೆದಿದ್ದರು. ಅಧ್ಯಯನದ ಜೊತೆಗೆ 'ತುತ್ತು ತತ್ವ', 'ಆಹಾರ ರಾಜಕೀಯ', 'ರಸ ತತ್ವ' ಸೇರಿದಂತೆ ಹಲವು ಕೃತಿಗಳನ್ನು ರಚಿಸಿದ್ದಾರೆ.