ಮೈತ್ರಿ ಬೆನ್ನಲ್ಲೇ ಬಿಎಸ್‌ವೈ ಭೇಟಿ ಮಾಡಿದ ನಿಖಿಲ್

ಬೆಂಗಳೂರು,ಸೆ.24 : ಬಿಜೆಪಿ- ಜೆಡಿಎಸ್ ಮೈತ್ರಿ ಘೋಷಿಸಿದ ಬೆನ್ನಲ್ಲೇ ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಇಂದು ಬೆಂಗಳೂರಿನಲ್ಲಿ ಭೇಟಿ ಮಾಡಿದ್ದಾರೆ.
ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ನಿಖಿಲ್ ಕುಮಾರಸ್ವಾಮಿ ಯಡಿಯೂರಪ್ಪನವರ ಆಶಿ ರ್ವಾದ ಪಡೆಯಲು ಬಂದಿರುವುದಾಗಿ ತಿಳಿಸಿದ್ದಾರೆ.
ಈ ಲಿಂಕ್ ಅನ್ನು ಕ್ಲಿಕ್ ಮಾಡಿ http://www.krantideepa.com/
ಜೆಡಿಎಸ್ ಮತ್ತು ಬಿಜೆಪಿ ಈಗ ಎನ್‌ಡಿಎ ಮೈತ್ರಿ ಕೂಟದ ಭಾಗವಾಗಿವೆ. ಯಡಿಯೂರಪ್ಪ ರಾಜ್ಯದ ಹಿರಿಯ ನಾಯಕರಾಗಿದ್ದು, ಅವರ ಆಶೀರ್ವಾದ ಪಡೆಯಲು ನಾನು ಇಲ್ಲಿಗೆ ಬಂದಿದ್ದೇನೆ. ಅವರು ಎಲ್ಲರೊಂದಿಗೂ ಉತ್ತಮ ಬಾಂದವ್ಯ ಹೊಂದಿದ್ದಾರೆ ಎಂದಿದ್ದಾರೆ.ಈ ವೇಳೆ ಬಿಎಸ್‌ವೈಗೆ ಶಾಲು ಹೊದಿಸಿ ಸನ್ಮಾನ ಮಾಡಿದ ನಿಖಿಲ್ ಕುಮಾರಸ್ವಾಮಿ, ಕೃಷ್ಣನ ಮೂರ್ತಿಯನ್ನು ಉಡುಗೊರೆಯಾಗಿ ನೀಡಿದ್ದಾರೆ.