ರೈಲ್ವೆ ಕಾಮಗಾರಿ ಶೀಘ್ರ ಪೂರ್ಣ: ಸಂಸದ ಬಿವೈಆರ್ ಭರವಸೆ

ರೈಲ್ವೆ ಕಾಮಗಾರಿ ಶೀಘ್ರ ಪೂರ್ಣ: ಸಂಸದ ಬಿವೈಆರ್ ಭರವಸೆ

ಶಿವಮೊಗ್ಗ,ಅ.19 : ಶಿವಮೊಗ್ಗ ನಗರದ  ಸಂಚಾರ ವ್ಯವಸ್ಥೆ ಗಮನಿಸಿ ಸುಗಮ ಸಂಚಾರಕ್ಕಾಗಿ ಐದು ರೈಲ್ವೆ ಮೇಲ್ಸೇತುವೆ ಹಾಗೂ ಎರಡು ರೈಲ್ವೆ ಅಂಡರ್‌ಪಾಸ್‌ಗಳನ್ನು ಸುಮಾರು ೧೪೦ಕೋಟಿ ವೆಚ್ಚದಲ್ಲಿ ಮಾಡಲಾಗುತ್ತಿದ್ದು, ಅಂತಿಮ ಹಂತದಲ್ಲಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದ್ದಾರೆ.

ಸವಳಂಗ ರಸ್ತೆಯ ಎಲ್‌ಸಿ-49, 39 ಕೋಟಿ ವೆಚ್ಚದ ರೈಲ್ವೆ ಮೇಲ್ಸೇತುವೆ ಕಾಮಗಾರಿ ಪ್ರಗತಿ ಪರಿಶೀಲನೆ ಮಾಡಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ಈಗಾಗಲೇ ಸೋಮಿನಕೊಪ್ಪ ರೈಲ್ವೆ ಮೇಲ್ಸೇತುವೆ ಹಾಗೂ ಪಿಎನ್‌ಟಿ ಕಾಲೋನಿ ಬಳಿ ರೈಲ್ವೆ ಅಂಡರ್ ಪಾಸ್ ಒಟ್ಟು 27 ಕೋಟಿ ವೆಚ್ಚದಲ್ಲಿ ಪೂರ್ಣಗೊಂಡು ಲೋಕಾರ್ಪಣೆಗೊಂಡಿದೆ. ಭದ್ರಾವತಿ ತಾಲೂಕಿನ ಕಡದಕಟ್ಟೆ ಬಳಿ ಎಲ್.ಸಿ-34 ಮೇಲ್ಸೇತುವೆ ಕಾಮಗಾರಿ ಕೂಡ ಪ್ರಗತಿಯಲ್ಲಿದೆ. ವಿದ್ಯಾನಗರದ ರೈಲ್ವೆ ಮೇಲ್ಸೇತುವೆ 43 ಕೋಟಿ ವೆಚ್ಚದಲ್ಲಿ ಅತ್ಯಂತ ಸುಂದರವಾಗಿ ನಿರ್ಮಾಣ ಗೊಂಡಿದ್ದು, ಪೂರ್ಣ ಗೊಳ್ಳುವ ಹಂತದಲ್ಲಿದೆ. ಡಿಸೆಂಬರ್ ಅಂತ್ಯಕ್ಕೆ ಎಲ್ಲಾ ಕಾಮಗಾರಿ ಮುಗಿದು ಸಾರ್ವಜನಿಕರ ಉಪಯೋಗಕ್ಕೆ ಸಿಗಲಿದೆ ಎಂದರು.

ಈ ಲಿಂಕ್ ಅನ್ನು ಕ್ಲಿಕ್ ಮಾಡಿ  http://www.krantideepa.com/

ಕೆಲವು ಕಡೆ ಅಡ್ಡರಸ್ತೆ ಕಾಮಗಾರಿಗಳು ಹೆಚ್ಚುವರಿ ಯಾಗಿ ಹಮ್ಮಿಕೊಳ್ಳಲಾಗಿದ್ದು, ಸಾರ್ವಜನಿಕರಿಗೆ ಅನುಕೂಲವಾಗುವ ದೃಷ್ಟಿಯಿಂದ ಹೆಚ್ಚುವರಿ ಯಾಗಿ ಎರಡು ಸಣ್ಣ ಸೇತುವೆ ಗಳನ್ನು ಕೂಡ ಮಾಡಲಾಗುತ್ತಿದೆ ಎಂದರು.

ಇತಿಹಾಸದಲ್ಲೇ ಇಷ್ಟೊಂದು ವೇಗವಾಗಿ ರೈಲ್ವೆ ಕಾಮಗಾರಿಗಳು ಮುಗಿಯುತ್ತಿರುವುದು ಇದೇ ಮೊದಲು. ಇದಕ್ಕಾಗಿ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅಂತ್ಯಕ್ಕೆ ಎಲ್ಲಾ ಕಾಮಗಾರಿ ಮುಗಿದು ಸಾರ್ವಜನಿಕರ ಉಪಯೋಗಕ್ಕೆ ಸಿಗಲಿದೆ ಎಂದರು.

ಕೆಲವು ಕಡೆ ಅಡ್ಡರಸ್ತೆ ಕಾಮಗಾರಿಗಳು ಹೆಚ್ಚುವರಿ ಯಾಗಿ ಹಮ್ಮಿಕೊಳ್ಳಲಾಗಿದ್ದು, ಸಾರ್ವಜನಿಕರಿಗೆ ಅನುಕೂಲವಾಗುವ ದೃಷ್ಟಿಯಿಂದ ಹೆಚ್ಚುವರಿ ಯಾಗಿ ಎರಡು ಸಣ್ಣ ಸೇತುವೆ ಗಳನ್ನು ಕೂಡ ಮಾಡಲಾಗುತ್ತಿದೆ. ರೈಲ್ವೆ ಅಕಾರಿಗಳು ಕೂಡ ಅತ್ಯಂತ ಸಹಕಾರ ನೀಡಿದ್ದಾರೆ. ಶಿವಮೊಗ್ಗ ನಗರದ ಅಭಿವೃದ್ಧಿ ದೃಷ್ಟಿಯಿಂದ ಈ ಕಾಮಗಾರಿಗಳಿಂದ ಸಾರ್ವಜನಿಕರ ಸುಗಮ ಸಂಚಾರಕ್ಕೆ ಅತ್ಯಂತ ಅನುಕೂಲವಾಗಲಿದೆ ಎಂದರು.

ಈ ಸಂದರ್ಭದಲ್ಲಿ ರೈಲ್ವೆ ಇಂಜಿನಿಯರ್ ರಾಜ್‌ಕುಮಾರ್, ಸ್ಮಾರ್ಟ್ ಸಿಟಿ ಕಾರ್ಯಪಾಲಕ ಇಂಜಿನಿಯರ್ ವಿಜಯಕುಮಾರ್, ಕರ್ನಾಟಕ ಜಲ ಮಂಡಳಿ ಕಾರ್ಯಪಾಲಕ ಅಭಿಯಂತರ ಸಿದ್ದಪ್ಪ, ಸ್ಥಳೀಯ ಕಾರ್ಪೊರೇಟರ್ ಇ. ವಿಶ್ವಾಸ್, ಬಿಜೆಪಿ ನಗರಾಧ್ಯಕ್ಷ ಜಗದೀಶ್, ಪ್ರಮುಖರಾದ ಜ್ಯೋತಿಪ್ರಕಾಶ್, ಮಾಲತೇಶ್, ದಿವಾಕರ ಶೆಟ್ಟಿ, ರಾಜೇಶ್ ಕಾಮತ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.