ಸೆ. 26 : ಎಂ.ಶ್ರೀಕಾಂತ್ ಕಾಂಗ್ರೆಸ್ ಸೇರ್ಪಡೆ

ಸೆ. 26 : ಎಂ.ಶ್ರೀಕಾಂತ್  ಕಾಂಗ್ರೆಸ್ ಸೇರ್ಪಡೆ

ಶಿವಮೊಗ್ಗ : ಜೆಡಿಎಸ್ ಜಿಲ್ಲಾಧ್ಯಕ್ಷ, ಸಮಾಜ ಸೇವಕ ಎಂ.ಶ್ರೀಕಾಂತ್ ಕಾಂಗ್ರೆಸ್ ಸೇರ್ಪಡೆಗೆ ಮುಹೂರ್ತ ನಿಗದಿಯಾಗಿದ್ದು, ಸೆಪ್ಟೆಂಬರ್ 26 ರಂದು ಅಧಿಕೃತವಾಗಿ ಕಾಂಗ್ರೆಸ್s ಸೇರ್ಪಡೆಯಾಗಲಿದ್ದಾರೆ. 

ಅಂದು ಬೆಳಗ್ಗೆ 10 ಗಂಟೆಗೆ ಕೆಪಿಸಿಸಿ ಕಚೇರಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ.

ಎಂ.ಶ್ರೀಕಾಂತ್ ಅವರು ಇತ್ತೀಚೆಗಷ್ಟೇ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಮಧು ಬಂಗಾರಪ್ಪ, ಕೆಪಿಸಿಸಿ ಸಹಕಾರ ವಿಭಾಗದ ಸಂಚಾಲಕ ಆರ್.ಎಂ. ಮಂಜುನಾಥಗೌಡ, ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ ಎನ್.ರಮೇಶ್ ಅವರೊಂದಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಕಾಂಗ್ರೆಸ್ ಸೇರುವ ಕುರಿತು ಚರ್ಚೆ ನಡೆಸಿದ್ದರು.

ಆನಂತರ ನಗರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಕಾಂಗ್ರೆಸ್ ಸೇರುವ ಕುರಿತು ಸ್ಪಷ್ಟಪಡಿಸಿದ್ದರು.  ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷವನ್ನು ಸದೃಢಗೊಳಿಸುವಲ್ಲಿ ಎಂ.ಶ್ರೀಕಾಂತ್ ಪಾತ್ರ ಪ್ರಮುಖವಾಗಿತ್ತು. ಅವರು ಜಿಲ್ಲಾಧ್ಯಕ್ಷರಾಗಿದ್ದ ಅವಧಿಯಲ್ಲಿ ಭದ್ರಾವತಿ, ಶಿವಮೊಗ್ಗ ಗ್ರಾಮಾಂತರ ಕ್ಷೇತ್ರಗಳಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಜೆಡಿ.ಎಸ್. ಅಭ್ಯರ್ಥಿಗಳು ಗೆಲುವು ಸಾಧಿಸಿದ್ದರು. ಜಿಲ್ಲಾ ಪಂಚಾಯಿತಿ ಹಾಗೂ ಶಿವಮೊಗ್ಗ ಮಹಾನಗರ ಪಾಲಿಕೆ ಚುನಾವಣೆಗಳಲ್ಲಿಯೂ ಹಲವಾರು ಅಭ್ಯರ್ಥಿಗಳು ಗೆಲುವು ಸಾಧಿಸಿದ್ದರು.

ಈ ಲಿಂಕ್ ಅನ್ನು ಕ್ಲಿಕ್ ಮಾಡಿ  http://www.krantideepa.com/

ಜೆಡಿಎಸ್ ಪಕ್ಷಕ್ಕೆ ಯಾವುದೇ ಅಸ್ತಿತ್ವವೂ ಇಲ್ಲದಿದ್ದ ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದಿಂದ ಎಂ.ಶ್ರೀಕಾಂತ್ ಅವರೇ ಸ್ಪರ್ಧಿಸಿ 20 ಸಾವಿರಕ್ಕೂ ಹೆಚ್ಚು ಮತಗಳನ್ನು ಪಡೆದುಕೊಂಡಿದ್ದರು.

ಎಂ.ಶ್ರೀಕಾಂತ್ ಅವರೊಂದಿಗೆ ಪಾಲಿಕೆ ಮಾಜಿ ಮೇಯರ್, ಹಾಲಿ ಸದಸ್ಯ ನಾಗರಾಜ್ ಕಂಕಾರಿ, ಮಾಜಿ ಉಪಮೇಯರ್ ಎಸ್.ಪಾಲಾಕ್ಷಿ, ಪಾಲಿಕೆ ಮಾಜಿ ಸದಸ್ಯ ಗಾಡಿಕೊಪ್ಪ ರಾಜಣ್ಣ, ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷ ಭಾಸ್ಕರ್, ಪ್ರಸನ್ನ ಸೇರಿದಂತೆ ಹಲವರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ.