ವಿಜಯೇಂದ್ರ ಮಾತು ತಮಾಷೆ ಎನಿಸುತ್ತಿದೆ

ವಿಜಯೇಂದ್ರ ಮಾತು ತಮಾಷೆ ಎನಿಸುತ್ತಿದೆ

ಬೆಂಗಳೂರು,ಅ.17 : ಪಂಚರಾಜ್ಯಗಳ ಚುನಾವಣೆ ಸೋಲಿನ ಭಯದಿಂದಾಗಿ ಉದ್ಯಮಿಗಳು ಮತ್ತು ಗುತ್ತಿಗೆದಾರರನ್ನು ಬ್ಲಾಕ್ಮೇಲ್ ಮಾಡುವ ದುರುದ್ದೇಶದ ಕಾರಣಕ್ಕಾಗಿಯೇ ಕೇಂದ್ರದ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಕರ್ನಾಟಕವೂ ಸೇರಿದಂತೆ ದೇಶದಾದ್ಯಂತ ಐ.ಟಿ, ಇ.ಡಿ ದಾಳಿಗಳನ್ನು ನಡೆಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಐ.ಟಿ, ಇ.ಡಿ ದಾಳಿ ವಿಚಾರವಾಗಿ ಸಾಮಾಜಿಕ ಮಾಧ್ಯಮ ‘ಎಕ್ಸ್’ನಲ್ಲಿ ಸರಣಿ ಪೋಸ್ಟ್ ಹಂಚಿಕೊಂಡಿರುವ ಅವರು, ಗುತ್ತಿಗೆದಾರರೊಬ್ಬರನ್ನು ಹಣಕ್ಕಾಗಿ ಪೀಡಿಸಿ ಆತ್ಮಹತ್ಯೆ ಮಾಡಿಕೊಳ್ಳುವಂತೆ ಮಾಡಿದ್ದ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪನವರು ಮತ್ತು ಭ್ರಷ್ಟಾಚಾರದ ಆರೋಪದ ಮೇಲೆಯೇ ಜೈಲಿಗೆ ಹೋಗಿ ಬಂದಿರುವ ಬಿ.ಎಸ್. ಯಡಿಯೂರಪ್ಪನವರು ಮತ್ತು ಅವರ ಮಗ ಕೂಡಾ ಸತ್ಯಹರಿಶ್ಚಂದ್ರನಂತೆ ಮಾತನಾಡುತ್ತಿರುವುದು ತಮಾಷೆ ಯಾಗಿ ಕಾಣುತ್ತಿದೆ ಎಂದು ವ್ಯಂಗ್ಯವಾಡಿದ್ದಾರೆ.

ಈ ಲಿಂಕ್ ಅನ್ನು ಕ್ಲಿಕ್ ಮಾಡಿ  http://www.krantideepa.com/

ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ, ಮುನಿರತ್ನ, ಡಾ.ಸುಧಾಕರ್ ಮತ್ತು ಬಿ.ಸಿ.ಪಾಟೀಲ್ ಮೇಲೆ ಶೇ 40 ರಷ್ಟು ಕಮಿಷನ್ ಪಡೆದ ಆರೋಪ ಇದೆ. ಬಿಟ್ ಕಾಯಿನ್ ಹಗರಣದದಲ್ಲಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮತ್ತು ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೆಸರು ಕೇಳಿಬಂದಿದೆ.

ಪಿಎಸ್‌ಐ ನೇಮಕಾತಿ ಹಗರಣದಲ್ಲಿ ಡಾ.ಅಶ್ವತನಾರಾಯಣ, ಬಿ.ವೈ.ವಿಜಯೇಂದ್ರ ಮತ್ತು ಆರಗ ಜ್ಞಾನೇಂದ್ರ ಶಾಮೀಲಾಗಿರುವ ಆರೋಪ ಎದುರಿಸುತ್ತಿದ್ದಾರೆ. ಚುನಾವಣಾ ಟಿಕೆಟ್ ವಂಚನೆ ಪ್ರಕರಣದಲ್ಲಿ ಬಿ.ಎಲ್.ಸಂತೋಷ್, ಸುನೀಲ್ ಕುಮಾರ್ ಮತ್ತು ಸಿ.ಟಿ.ರವಿ ಅವರ ಹೆಸರುಗಳನ್ನು ಆರೋಪಿಗಳೇ ಉಲ್ಲೇಖಿಸಿದ್ದಾರೆ. ಇವರೆಲ್ಲರೂ ಸೇರಿ ನಮ್ಮ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡುತ್ತಿರುವುದು ಹಾಸ್ಯಾಸ್ಪದ ವಾಗಿದೆ ಎಂದು ಕಿಡಿಕಾರಿದ್ದಾರೆ.